ಉಪ್ಪಿನಂಗಡಿ :ಉಪ್ಪಿನಂಗಡಿ ನೆಕ್ಕಲಾಡಿ ಜಂಕ್ಷನ್ ಬಳಿ ಇಂದು(ಜು.5) ಮುಂಜಾನೆ ಲಾರಿ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ.
ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ( K. A 20 Ac 3358) ಮತ್ತು ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ಬರುತ್ತಿದ್ದ ಬಸ್ ನಡುವೆ ಈ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ವಾಹನಗಳ ಮುಂಬಾಗ ನಜ್ಜುಗುಜ್ಜಾಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.