ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀ ಕೃಷ್ಣ ಜೆ ರಾವ್ (21) ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣಾ ಪೊಲೀಸರು ಜು.4 ರಂದು ರಾತ್ರಿ ಮೈಸೂರಿನ ಟಿ ನರಸಿಪುರ ಎಂಬಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದಿರುವುದಾಗಿ ಪೊಲೀಸ್ ಇಲಾಖಾ ಪ್ರಕಟಣೆ ತಿಳಿಸಿದೆ.
ಜೂ.24 ರಂದು ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ:49/2025, ಕಲಂ:64(1), 69 ಬಿ.ಎನ್.ಎಸ್ 2023 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶ್ರೀ ಕೃಷ್ಣ ಜೆ ರಾವ್ ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣಾ ಪೊಲೀಸರು ಮೈಸೂರಿನ ಟಿ ನರಸಿಪುರ ಎಂಬಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದಿರುತ್ತಾರೆ. ಆರೋಪಿತನ ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಆರೋಪಿಯನ್ನು ಆಸ್ಪತ್ರೆಗೆ ಕರೆ ತಂದ ಪೊಲೀಸರು
ಬಂಧಿತ ಕೃಷ್ಣ ರಾವ್ ನನ್ನು ಪೊಲೀಸರು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಪರೀಕ್ಷೆಗೆ ಕರೆತಂದಿದ್ದಾರೆ ಎಂದು ತಿಳಿದು ಬಂದಿದೆ.
