ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ ಅವರನ್ನು ಪೊಲೀಸರು ಜು.4ರಂದು ರಾತ್ರಿ ಮೈಸೂರಿನ ಟಿ ನರಸಿಪುರದಿಂದ ಬಂಧಿಸಿದ್ದು, ಜು.5ರಂದು ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಆರೋಪಿಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಯಿತು.
