ಪುತ್ತೂರು: ಅದಿತ್ಯ ಆರ್. ಬನ್ನೂರು ಅವರು ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ICAI) ಮೇ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.
ಪುತ್ತೂರಿನ ಹಿರಿಯ ಬಿಜೆಪಿ ಕಾರ್ಯಕರ್ತ ಹಾಗೂ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಮತ್ತು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು, ಪುತ್ತೂರಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥೆ ಸುಧಾ ಕುಮಾರಿ ಪಿ.ಕೆ ದಂಪತಿ ಪುತ್ರ ಅದಿತ್ಯ ಅವರು ತಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾಭ್ಯಾಸವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ ಪೂರ್ಣಗೊಳಿಸಿದ್ದಾರೆ. ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪಿಯು ಕಾಲೇಜು ಹಾಗೂ ಪದವಿ ಶಿಕ್ಷಣವನ್ನು ವಿವೇಕಾನಂದ ಕಾಲೇಜು ಮತ್ತು ತ್ರಿಷಾ ವಿದ್ಯಾಸಂಸ್ಥೆ, ಮಂಗಳೂರಿನಲ್ಲಿ ಮಾಡಿದ್ದಾರೆ. ಅವರು ಮಂಗಳೂರಿನ ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆ ಎ. ಉಮಾನಾಥ್ ರಾವ್ ಅಂಡ್ ಕಂಪನಿಯಲ್ಲಿ ಸಿಎ ಆರ್ಟಿಕಲ್ ಶಿಪ್‌ನ್ನು ಪೂರ್ಣಗೊಳಿಸಿದ್ದಾರೆ.