ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಆ.8ರಂದು ನಡೆಯುವ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ ಜು.6ರಂದು ದೇವಸ್ಥಾನದಲ್ಲಿ ನಡೆಯಿತು. ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ್ ಕುಮಾರ್ ರೈ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.
ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ. ನಿರಂಜನ ರೈ ಮಠಂತಬೆಟ್ಟು, ಪ್ರಧಾನ ಅರ್ಚಕ ರಾಮಕೃಷ್ಣ ಭಟ್, ಪ್ರಮುಖರಾದ ಜಯಪ್ರಕಾಶ್ ಬದಿನಾರು, ವಿಕ್ರಂ ಶೆಟ್ಟಿ ಅಂತರ, ಸಂತೋಷ್ ಕುಮಾರ್ ರೈ ಕೆದಿಕಂಡೆಗುತ್ತು, ಸದಾಶಿವ ಸಾಮಾನಿ ಸಂಪಿಗೆದಡಿ, ರಾಜಮಣಿ ರೈ ಮಠಂತಬೆಟ್ಟು, ದೇವದಾಸ ಗೌಡ ಪಿಲಿಗುಂಡ, ದಾಮೋದರ ಶೆಟ್ಟಿ ಮಠಂತಬೆಟ್ಟು, ಶಿವಪ್ರಸಾದ್ ರೈ ಮಠಂತಬೆಟ್ಟು, ರೇಣುಕಾ ಮುರಳೀಧರ ರೈ ಮಠಂತಬೆಟ್ಟು, ಶ್ರದ್ಧಾ ಸುದೇಶ್ ಶೆಟ್ಟಿ ಶಾಂತಿನಗರ, ಪದ್ಮಲತಾ ಜಗನ್ನಾಥ ಶೆಟ್ಟಿ ನಡುಮನೆ, ವಿದ್ಯಾ ಆಚಾರ್ಯ ಕೊಂಬಕೋಡಿ, ವಿಜಯಲಕ್ಷ್ಮಿ ಶೆಟ್ಟಿ ಕೇದಗೆ, ಪ್ರೇಮಲತಾ ದೇವದಾಸ್ ಡೆಕ್ಕಾಜೆ, ಅಮಿತಾ ಗೌತಮ್ ಕುಕ್ಯಾನ್, ಅನುರಾಧ ರಮೇಶ್ ನಾಯಕ್ ನೆಕ್ಕರಾಜೆ, ಪವಿತ್ರ ಸೇಡಿಯಾಪು ಮತ್ತಿತರರು ಉಪಸ್ಥಿತರಿದ್ದರು.