ಪುತ್ತೂರು: ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಜು.27ರಂದು ನಡೆಯಲಿರುವ ಆಟಿ ಹಬ್ಬ ಕಾರ್ಯಕ್ರಮದ ಆಮಂತ್ರಣವನ್ನು ಜು.6ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿನ ಸಂಘದ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಪ್ರಧಾನ ಕಾರ್ಯದರ್ಶಿ ದಯಾನಂದ ಕೆ.ಎಸ್, ಮಾಜಿ ಅಧ್ಯಕ್ಷ ವಿಶ್ವನಾಥ ಗೌಡ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಮಹಿಳಾ ಸಂಘದ ಅಧ್ಯಕ್ಷೆ ವಾರಿಜ ಕೆ, ಶಿವರಾಮ ಮತಾವು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಬೆಳ್ಳಿಪ್ಪಾಡಿಯ ಸೋಮಪ್ಪ ಗೌಡ ಕೋಡಿಯಡ್ಕ ಅವರಿಗೆ ಆರೋಗ್ಯ ಸಂಬಂಧ ಆರ್ಥಿಕ ನೆರವು ನೀಡಲಾಯಿತು.