
ರಾಮಕುಂಜ: ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆ, ಎಸ್ಆರ್ಕೆ ಲ್ಯಾಡರ್ಸ್ ಮತ್ತು ಸಾಯ್ ಎಂಟರ್ಪ್ರೈಸಸ್ ಪುತ್ತೂರು ಇವರ ಸಹಭಾಗಿತ್ವದಲ್ಲಿ ‘ಟೆಕ್ ಆನ್ ವೀಲ್’ ಎಂಬ ಸರಣಿಯ ಕಾರ್ಯಕ್ರಮದ ಮೊದಲನೇ ಹಂತವಾಗಿ ತಾಂತ್ರಿಕ ಕಾರ್ಯಗಾರ ಜು.5ರಂದು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲಾ ಸಭಾಂಗಣದಲ್ಲಿ ಜರುಗಿತು.
ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್ ಭಟ್ ವಹಿಸಿದ್ದರು. ಎಸ್ಆರ್ಕೆ ಲ್ಯಾಡರ್ಸ್ ಮಾಲಕ ಕೇಶವ ಅಮೈ ಮತ್ತು ಸಾಯ ಎಂಟರ್ಪ್ರೈಸಸ್ ಮಾಲಕರಾದ ಗೋವಿಂದ ಪ್ರಕಾಶ್ ಪುತ್ತೂರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಂಜ ಸ್ಪರ್ಶ ಎಲೆಕ್ಟ್ರಾನಿಕ್ಸ್ ಮಾಲಕ ಪುರುಷೋತ್ತಮ ಎ., ಕಡಬ ಒಕ್ಕಲಿಗ ಸೇವಾ ಟ್ರಸ್ಟ್ನ ಅಧ್ಯಕ್ಷ ಅಶೋಕ್ ಶೇಡಿ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯ ಸತೀಶ್ ಭಟ್, ಗಣಿತ ಶಿಕ್ಷಕ ವೆಂಕಟೇಶ್ ದಾಮ್ಲೆ ಮತ್ತು ಪ್ರವೀಣ್ ಕುಮಾರ್ರವರು ಅತಿಥಿಗಳಿಗೆ ಶಾಲು ಹೊದಿಸಿ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು. ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಉಪನ್ಯಾಸಕ ಚೇತನ್ ನಿರೂಪಿಸಿದರು. ಇಂಗ್ಲಿಷ್ ಭಾಷಾ ಶಿಕ್ಷಕ ಪ್ರವೀಣ್ ಕುಮಾರ್ ಸ್ವಾಗತಿಸಿದರು. ಶಿಕ್ಷಕ ದಿನೇಶ್ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ಕೃಷಿ ಉಪಕರಣಗಳ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆಯು ನಡೆಯಿತು. ಈ ಸಂದರ್ಭದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.