ಜು.13: ಚಿಗುರೆಲೆ ಸಾಹಿತ್ಯ ಬಳಗದಿಂದ ದಿ.ಚಿದಾನಂದ ಕಾಮತ್ ಕಾಸರಗೋಡು ಸ್ಮರಣಾರ್ಥ ಮುಂಗಾರು ಕವಿಗೋಷ್ಠಿ

0

ಪುತ್ತೂರು: ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಸಹಕಾರದಲ್ಲಿ, ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಇದರ ಆಶ್ರಯದಲ್ಲಿ ದಿ. ಚಿದಾನಂದ ಕಾಮತ್ ಕಾಸರಗೋಡು ಇವರ ಸ್ಮರಣಾರ್ಥ ಮುಂಗಾರು ಕವಿಗೋಷ್ಠಿ -2025 ಜು.13ರಂದು ಬೆಳಿಗ್ಗೆ ಪುತ್ತೂರು ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪ್ರಗತಿ ಎಜುಕೇಶನಲ್ ಫೌಂಡೇಶನ್ ಪುತ್ತೂರು ಇದರ ಸ್ಥಾಪಕಾಧ್ಯಕ್ಷ ಗೋಕುಲ್ ನಾಥ್ ಪಿ ವಿ ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ.

ಪುತ್ತೂರು ಸುದ್ದಿ ಚಾನೆಲ್ ನಿರೂಪಕಿ ಹೇಮಾ ಜಯರಾಮ್, ಕಲ್ಲಚ್ಚು ಪ್ರಕಾಶನ ಮಂಗಳೂರು ಇದರ ಪ್ರಕಾಶಕ ಮಹೇಶ್ ಆರ್ ನಾಯಕ್, ವಾರ್ತಾ ಭಾರತಿ ಕನ್ನಡ ದಿನ ಪತ್ರಿಕೆ ಬೆಂಗಳೂರು ವರದಿಗಾರ ಇಬ್ರಾಹಿಂ ಖಲೀಲ್ ಬನ್ನೂರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಯುವ ಸಾಹಿತಿಗಳು ಮತ್ತು ಕಪ್ಪತ್ತಗಿರಿ ಸಾಹಿತ್ಯ ಮತ್ತು ಸಾಂಸ್ಕೃತಿಕ, ಕಲಾ ವೇದಿಕೆ ಗದಗ ಜಿಲ್ಲಾ ಇದರ ಸ್ಥಾಪಕಾಧ್ಯಕ್ಷರಾದ ಚಂದ್ರಕಲಾ ಎಂ ಇಟಗಿಮಠ ರವರ ಅಧ್ಯಕ್ಷತೆಯಲ್ಲಿ, ಮಧು ಪ್ರಪಂಚ ಪತ್ರಿಕೆ ಸಂಪಾದಕರು ಮತ್ತು ಹಿರಿಯ ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿಯವರ ಉಪಸ್ಥಿತಿಯೊಂದಿಗೆ ಮುಂಗಾರು ಕವಿಗೋಷ್ಠಿ ನಡೆಯಲಿದೆ.ಕವಿಗೋಷ್ಠಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 52 ಕವಿಗಳು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮ ಸಂಯೋಜಕ ನಾರಾಯಣ ಕುಂಬ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here