ಗೆಜ್ಜೆಗಿರಿ ಕ್ಷೇತ್ರ ಅಭಿವೃದ್ದಿಗೆ 2 ಕೋಟಿ ಅನುದಾನ ಮಂಜೂರು; ಶಾಸಕ ಅಶೋಕ್ ರೈ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಅತ್ಯಂತ ಪ್ರಸಿದ್ದ ಕ್ಷೇತ್ರವಾದ ಗೆಜ್ಜೆಗಿರಿಯ ಅಭಿವೃದ್ದಿಗೆ 2 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು.


ಕೊಡಿಂಬಾಡಿ ಶ್ರೀ ಮಹಿಮರ್ದಿನಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು ಗೆಜ್ಜೆಗಿರಿ ಎಂಬ ಪವಿತ್ರ ಹಾಗೂ ಪ್ರಸಿದ್ದ ಕ್ಷೇತ್ರವನ್ನು ಅಭಿವೃದ್ದಿ ಮಾಡುವ ವಿಚಾರದಲ್ಲಿ ನಾನು ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿ ಸರಕಾರದ ಗಮನ ಸೆಳೆದಿದ್ದೆ. ಪ್ರವಾಸೋಧ್ಯಮ ಇಲಾಖೆ ಹಾಗೂ ಸಚಿವರ ಜೊತೆಯೂ ಮಾತುಕತೆ ನಡೆಸಿದ್ದೇನೆ. ಕ್ಷೇತ್ರವನ್ನು ಪ್ರವಾಸೋಧ್ಯಮ ಇಲಾಖೆಯಲ್ಲಿ ಸೇರ್ಪಡೆ ಮಾಡುವ ಮೂಲಕ ಕರ್ನಾಟಕ ಪ್ರಸಿದ್ದ ಪ್ರವಾಸಿ ಕ್ಷೇತ್ರಗಳ ಪೈಕಿ ಗೆಜ್ಜೆಗಿರಿಯನ್ನು ಕೂಡಾ ಸೇರಿಸಿಕೊಳ್ಳುವ ಬಗ್ಗೆ ಸರಕಾರದ ಜೊತೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.


ಮೊದಲ ಹಂತದಲ್ಲಿ ಕ್ಷೇತ್ರಕ್ಕೆ ಎರಡು ಕೋಟಿ ಅನುದಾನ ಮಂಜೂರಾಗಿದ್ದು, ಸಮಿತಿಯ ಜೊತೆ ಚರ್ಚೆ ನಡೆಸಿ ಅಲ್ಲಿ ಕೈಗೊಳ್ಳಬೇಕಾದ ಅಭಿವೃದ್ದಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿ ಅನುದಾನದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ನಡೆಸಲಾಗುತ್ತದೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನವನ್ನು ನೀಡುವ ಮೂಲಕ ಕ್ಷೇತ್ರವನ್ನು ಅಭಿವೃದ್ದಿ ಪಡಿಸಲಾಗುವುದು ಎಂದು ಶಾಸಕರು ತಿಳಿಸಿದರು.


ಈ ಸಂದರ್ಭದಲ್ಲಿ ಗೆಜ್ಜೆಗಿರಿ ಕ್ಷೇತ್ರದ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಂ ಕೆ ಬಿ,ಸಮಿತಿಯ ಉಪಾಧ್ಯಕ್ಷರಾದ ಉಲ್ಲಾಸ್ ಕೋಟ್ಯಾನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here