ಸುಳ್ಯ: ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2025-26ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮ ವಿದ್ಯಾರ್ಥಿಗಳಿಗೆ ʼಸ್ವಾಗತ ಮತ್ತು ಅಭಿವಿನ್ಯಾಸʼ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಪುತ್ತೂರಿನ ಉದ್ಯಮಿ, ಡಿಂಬ್ರಿ ಕುರಿಯದಲ್ಲಿರುವ ಅರುಣ್ ಇಂಡಸ್ಟ್ರೀಸ್ ಮೂಲಕ ಅರುಣ್ ಕುಮಾರ್ ರೈ ವಿದ್ಯಾರ್ಥಿಗಳಿಗೆ “ಇಂಡಸ್ಟ್ರೀಯಲ್ ಟಾಕ್ ” ಕಾರ್ಯಕ್ರಮ ನಡೆಸಿಕೊಟ್ಟರು. ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದ ಈ ಕಾರ್ಯಕ್ರಮದಲ್ಲಿ ಅರುಣ ಕುಮಾರ್ ಅವರಿಗೆ ಸಂಸ್ಥೆಯ ವತಿಯಿಂದ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.
