ಅರಿಯಡ್ಕ : ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ ಇವರನ್ನು ಭಾರತೀಯ ಜನತಾ ಪಾರ್ಟಿ ಪುತ್ತೂರು ಮಂಡಲದ ಅಧ್ಯಕ್ಷ ದಯಾನಂದ ರೈ ಉಜ್ರುಮಾರು ರವರ ಶಿಫಾರಸ್ಸಿನ ಮೇರೆಗೆ ,ದಿಶಾ ಸಮಿತಿ ಅಧ್ಯಕ್ಷರು ಹಾಗೂ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಜೌಟ ಅವರು ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಅನುಷ್ಠಾನ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ ) ನಾಮ ನಿರ್ದೇಶನ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿದ್ದಾರೆ.
ಇವರು ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಕಾರ್ಯಕರ್ತ ಹಾಗೂ ಕಳೆದ ಮೂರು ಬಾರಿ ಅರಿಯಡ್ಕ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಪ್ರಸ್ತುತ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.