ಪುತ್ತೂರು: ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ: ದೂರು

0

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಸೋಮವಾರ ಸಂಜೆ ದರ್ಬೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಶಾಸಕ ಅಶೋಕ್‌ ಕುಮಾರ್‌ ರೈ ವಿರುದ್ಧ ನಿಂದನಾತ್ಮಕ ಪದ ಬಳಸಿರುವುದಾಗಿ ಆರೋಪಿಸಿ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಲಾಗಿದೆ.

ಅಜಿತ್‌ ಮಡಿಕೇರಿ ಭಾಷಣದಲ್ಲಿ ಮುಖ್ಯಮಂತ್ರಿ ಹಾಗೂ ಶಾಸಕ ಅಶೋಕ್‌ ರೈ ವಿರುದ್ಧ ಕೆಟ್ಟ ಪದ ಪ್ರಯೋಗಿಸಿದ್ದು ಇದಲ್ಲದೆ ಕೋಮು ಭಾವನೆ ಕೆರಳಿಸುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೃಷ್ಣಪ್ರಸಾದ್‌ ಆಳ್ವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

LEAVE A REPLY

Please enter your comment!
Please enter your name here