ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿಯವರಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ

0

ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ

ಕಾಣಿಯೂರು: ರಾಜ್ಯದ ಇತಿಹಾಸ ಪ್ರಸಿದ್ದ ಕ್ಷೇತ್ರ ಆಗಿರುವ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ಅವರು ರಾಜ್ಯದ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಜು 8ರಂದು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ದೇವಸ್ಥಾನದ ವತಿಯಿಂದ ಸನ್ಮಾನಿಸಿ, ಕ್ಷೇತ್ರದ ಪ್ರಸಾದ ನೀಡಿ ಗೌರವಿಸಲಾಯಿತು. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸುವಂತೆ ಮತ್ತು ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳ ಕುರಿತು ಮಾಹಿತಿ ನೀಡಿ, ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಯರ್ತೋಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ನ್ಯಾಯವಾದಿ ಆಗಿರುವ ವೆಂಕಪ್ಪ ಗೌಡ ಮಾಚಿಲ,
ಮತ್ತಿತರರು ಈ ಸಂದರ್ಭದಲ್ಲಿದ್ದರು.

LEAVE A REPLY

Please enter your comment!
Please enter your name here