ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲಾ 205-25ನೇ ಸಾಲಿನ ನೂತನ ಮಂತ್ರಿ ಮಂಡಲದ ಪದಗ್ರಹಣವು ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ ಎಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಮಾತನಾಡಿ, ಪ್ರಜಾಪ್ರಭುತ್ವ ದೇಶದಲ್ಲಿರುವ ಭಾರತೀಯರಲ್ಲಿ ನಾಯಕತ್ವ ಭಾರತೀಯರ ರಕ್ತದಲ್ಲಿದೆ. ಭವ್ಯ ಭವಿಷ್ಯದ ನಾಯಕರನ್ನು ಸೃಷ್ಟಿಸುವ ಕೆಲಸ ಶಾಲೆಯಿಂದಲೇ ಆರಂಭವಾಗುವುದು ಉತ್ತಮ ಬೆಳವಣಿಗೆ, ಇಲ್ಲಿನ ಮಕ್ಕಳ ಶಿಸ್ತು ಅನುಕರಣೀಯ ಎಂದರು.



ಶಾಲಾ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರು, ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇಲ್ಲಿನ ವ್ಯವಸ್ಥಾಪನ ಸಮಿತಿ ಸದಸ್ಯರಾದ ವಿನಯ ಸುವರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ.ಎಸ್ ನೂತನ ಮಂತ್ರಿಮಂಡಲದ ಸದಸ್ಯರಿಗೆ ಪ್ರಮಾಣ ವಚನ ಭೋದಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್ ವಂದಿಸಿದರು. ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕಿಯರಾದ ದಿವ್ಯ, ಪ್ರಮೀಳಾ ಪ್ರೀತಿ, ನಳಿನಾಕ್ಷಿ, ಸಾತ್ವಿಕ ಮತ್ತು ಶಿವಪ್ರಿಯ ವಿವಿಧ ಜವಾಬ್ದಾರಿ ನಿರ್ವಹಿಸಿದರು.