ಪುತ್ತೂರು: ಮದುವೆಯಾಗುವುದಾಗಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಅವರ ತಂದೆ ಬಿಜೆಪಿ ನಗರ ಮಂಡಲದ ಮಾಜಿ ಅಧ್ಯಕ್ಷ ಹಾಗು ಪ್ರಸ್ತುತ ನಗರಸಭಾ ಸದಸ್ಯ ಆಗಿರುವ ಪಿ ಜಿ ಜಗನ್ನಿವಾಸ ರಾವ್ ಅವರಿಗೆ ಪುತ್ತೂರು ಬಿಜೆಪಿಯಿಂದ ಪಕ್ಷಕ್ಕೆ ಸಾರ್ವಜನಿಕವಾಗಿ ಮುಜುಗರ ಉಂಟುಮಾಡಿದ್ದಕ್ಕಾಗಿ ಕಾರಣ ಕೇಳಿ ಪಿ.ಜಿ ಜಗನ್ನಿವಾಸ ಅವರಿಗೆ ಬಿಜೆಪಿ ನೋಟಿಸ್ ಜಾರಿಯಾಗಿದೆ.
ಪುತ್ತೂರು ನಗರ ಮಂಡಲದ ಮಾಜಿ ಅಧ್ಯಕ್ಷರು, ಪ್ರಸ್ತುತ ಪುತ್ತೂರು ನಗರ ಸಭಾ ಸದಸ್ಯರಾಗಿರುವ ಜಗನ್ನಿವಾಸ ರಾವ್ ರವರೇ, ನಿಮ್ಮ ಮಗ ಪುತ್ತೂರಿನ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿ ಯುವತಿಗೆ ವಂಚಿಸಿದ ಬಗ್ಗೆ ಸುದ್ದಿ ಮಾದ್ಯಮ ಹಾಗೂ ಸಾರ್ವಜನಿಕವಾಗಿ ಆಗುತ್ತಿರುವ ಪ್ರಚಾರದಿಂದ ಪಕ್ಷಕ್ಕೆ ಮುಜುಗರ ಉಂಟಾಗಿದೆ. ಈ ಘಟನೆ ಬಗ್ಗೆ ಈಗಾಗಲೇ ಸಂತ್ರಸ್ಥೆಯ ಕುಟುಂಬದವರು ನೀವು ನ್ಯಾಯ ಸಮ್ಮತವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.
ತಾವು ಪಕ್ಷದಲ್ಲಿ ಜವಾಬ್ದಾರಿಯುತವಾಗಿ ನ್ಯಾಯಯುತವಾಗಿ ನಡೆದುಕೊಳ್ಳಬೇಕಾಗಿದ್ದು, ಸಂತ್ರಸ್ಥ ಯುವತಿಗೆ ನ್ಯಾಯ ಒದಗಿಸಿ ಕೊಡಬೇಕಾಗಿದೆ. ಇಲ್ಲದಿದ್ದಲ್ಲಿ ಪಕ್ಷದ ಹಿತದೃಷ್ಟಿಯಿಂದ ನಿಮ್ಮ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಬಗ್ಗೆ ತಾವು ತಕ್ಷಣವೇ ಉತ್ತರಿಸಬೇಕಾಗಿ ಸೂಚಿಸುತ್ತೇನೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರ ಸೂಚನೆಯಂತೆ ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಅವರು ಜು.4 ಕ್ಕೆ ಪಿ ಜಿ ಜಗನ್ನಿವಾಸ ರಾವ್ ಅವರ ವಿಳಾಸಕ್ಕೆ ರಿಜಿಸ್ಟ್ರರ್ ಪೋಸ್ಟ್ ಮಾಡಿದ್ದಾರೆ.