ವಿಟ್ಲ: ಅಳಕೆಮಜಲು ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ ಆ.8ರಂದು ನಡೆಯಲಿರುವ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಭಜನಾ ಮಂದಿರದ ವಠಾರದಲ್ಲಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಗೌರವ ಸಲಹೆಗಾರರಾದ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಭಜನಾ ಮಂಡಳಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಪೆಲತ್ತಿಂಜ, ಉಪಾಧ್ಯಕ್ಷರಾದ ಉದಯ ಕುಲಾಲ್ ಪುಂಡಿಕಾಯಿ, ಪ್ರಧಾನ ಕಾರ್ಯದರ್ಶಿ ಸಂಜೀವ ಗೌಡ ಪೆಲತ್ತಿಂಜ, ಜೊತೆ ಕಾರ್ಯದರ್ಶಿ ಪ್ರದೀಪ್ ಉರಿಮಜಲು, ನಿಕಟಪೂರ್ವ ಅಧ್ಯಕ್ಷರಾದ ಜಗದೀಶ್ ಪೂಜಾರಿ ಅಳಕೆಮಜಲು, ಮಹಿಳಾ ಸಮಿತಿ ಅಧ್ಯಕ್ಷರಾದ ಗೀತಾ ಶಿವಪ್ಪನಾಯ್ಕ ಅಳಕೆಮಜಲು, ಪದಾಧಿಕಾರಿಗಳಾದ ಸುದೀರ್ ಅಳಕೆಮಜಲು, ಕುಮಾರ್ ಅಳಕೆಮಜಲು ಸೇರಿದಂತೆ ವಿವಿಧ ಸಮಿತಿ ಪದಾಧಿಕಾರಿಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.