ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಕ್ರಪಾಣಿ ಎ.ಕೆ ಅವರು ಪಿ.ಎಸ್.ಐ ಆಗಿ ಪದೋನ್ನತಿ ಹೊಂದಿದ್ದು, ಇದೀಗ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

ಕಡಬ ತಾಲೂಕಿನ ಪಂಜ ನಿವಾಸಿಯಾಗಿರುವ ಚಕ್ರಪಾಣಿ ಅವರು ಕಳೆದ ಮೂರುವರೆ ವರ್ಷಗಳಿಂದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಅವರು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಆಗಿ ಪದೋನ್ನತಿ ಹೊಂದಿದ್ದು, ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.