ಉಪ್ಪಿನಂಗಡಿ: ಇಲ್ಲಿನ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಶ್ (30) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಮಂಗಳವಾರ ಸಂಭವಿಸಿದೆ.
ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮನೆಗಾರ ಮಜಲು ಮನೆ ನಿವಾಸಿ ದಿವಂಗತ ನೀಲಯ್ಯ ಗೌಡ ಎಂಬವರ ಮಗನಾದ ಸುರೇಶ್ ಅವರು ಕರ್ತವ್ಯಕ್ಕೆ ರಜೆ ಹಾಕಿ ಮನೆಯಲ್ಲಿದ್ದವರು. ಯಾವುದೋ ವೈಯಕ್ತಿಕ ಕಾರಣದಿಂದ ಮನನೊಂದು ಈ ಕೃತ್ಯಗೈದಿರುವುದಾಗಿ ದೂರಲಾಗಿದೆ. ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.