ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗ್ ನಿಧನ

0

ಪುತ್ತೂರು : ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗ್ (86ವ) ಅವರು ಜು. 8ರಂದು ನಿಧನರಾದರು.

ಮೃತರು ಮಣಿಕ್ಕಾರ ಪಾಲ್ತಾಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು.

ಮೃತರು ಮಕ್ಕಳಾದ ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನದ ಮೊಕ್ತೇಸರರಾದ ಲಕ್ಷ್ಮೀನಾರಾಯಣ ಶ್ಯಾನುಭಾಗ್, ನ್ಯಾಯವಾದಿ ಗೌರೀಶಚಂದ್ರ ಶ್ಯಾನುಭಾಗ್‌, ವಿದೇಶದಲ್ಲಿ ಉದ್ಯೋಗಿಯಾಗಿರುವ ಅನಿಲ್ ಶ್ಯಾನುಭಾಗ್, ಉದ್ಯಮಿ ರಾಜೇಶ್ ಶ್ಯಾನುಭಾಗ್, ಪುತ್ರಿಯರಾದ ವಂದನಾ ನಾಯಕ್, ಶಾಂತಾ ಕಾಮತ್‌ ಸೇರಿದಂತೆ ಮೊಮ್ಮಕ್ಕಳು, ಕುಟುಂಬಸ್ಥರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಜು.9ರಂದು ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯ ತನಕ ಮೃತರ ಸ್ವಗೃಹ ಮಣಿಕ್ಕಾರದ ತುಳಸಿ ಫಾರ್ಮ್ಸ್ ನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಬಳಿಕ ಅಂತ್ಯ ಸಂಸ್ಕಾರ ನಡೆಸಲಾಗುವುದೆಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

LEAVE A REPLY

Please enter your comment!
Please enter your name here