12 ಮಂದಿ ವಿವಿಧ ಕ್ಷೇತ್ರದ ಸಾಧಕರಿಗೆ ವಿಶೇಷ ಸನ್ಮಾನ, ಒಂದೇ ವೇದಿಕೆಯಲ್ಲಿ 350ಕ್ಕೂ ಹೆಚ್ಚು ಮಂದಿಗೆ ಗೌರವರ್ಪಣೆ- ಹೇಮನಾಥ ಶೆಟ್ಟಿ
ಪುತ್ತೂರು: ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಮಹಿಳಾ ಬಂಟರ ವಿಭಾಗ, ಯುವ ಬಂಟರ ವಿಭಾಗ ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಸಹಕಾರದೊಂದಿಗೆ ಜು.12 ರಂದು ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದ ತನಕ `ಪೆರ್ಮೆದ ಬಂಟೆರ್’ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಹೇಳಿದರು.
ಜು.9 ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾವು ಹೇಮನಾಥ ಶೆಟ್ಟಿ ಅವರು ಬಂಟರ ಸಂಘದ ಆಶ್ರಯದಲ್ಲಿ ಜು.12 ರಂದು ಜರಗಲಿರುವ ಪೆರ್ಮೆದ ಬಂಟೆರ್ ಕಾರ್ಯಕ್ರಮ ಅರ್ಥಪೂರ್ಣವಾಗಿ ಮೂಡಿಬರಲು ಎಲ್ಲರೂ ಪೂರ್ಣ ರೀತಿಯ ಸಹಕಾರವನ್ನು ನೀಡಬೇಕು. ನಮ್ಮ ಸಮಾಜದ ಬಂಟ ಸಾಧಕರನ್ನು ಗುರುತಿಸುವುದು, ಗೌರವಿಸುವುದು ನಮ್ಮ ಕರ್ತವ್ಯವಾಗಿದೆ. ಬಂಟರು ಜಗತ್ತಿನಲ್ಲಿಯೇ ನಾನಾ ರೀತಿಯ ಸಾಧನೆಯನ್ನು ಮಾಡಿ, ಸಮಾಜಕ್ಕೆ ಹೆಮ್ಮೆಯನ್ನು ತಂದಿದ್ದಾರೆ. ಆ ನಿಟ್ಟಿನಲ್ಲಿ ಬಂಟ ಸಮಾಜದ ೧೨ ಮಂದಿ ಸಾಧಕರನ್ನು ಸನ್ಮಾನಿಸಲಿದ್ದೇವೆ. ಜೊತೆಗೆ ನೂತನವಾಗಿ ಆಯ್ಕೆಯಾದ ಸರಕಾರಿ ನಾಮನಿರ್ದೇಶಿತ ಸದಸ್ಯರು, ಸಹಕಾರಿ ಸಂಘದ ಅಧ್ಯಕ್ಷರು ಮತ್ತು ನಿರ್ದೇಶಕರುಗಳು, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಮತ್ತು ನಿರ್ದೇಶಕರುಗಳು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ವಿವಿಧ ಕ್ಷೇತ್ರದ ಸಾಧಕರು ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿ, ಬೆಳಿಗ್ಗೆಯಿಂದ ಮಧ್ಯಾಹ್ನದ ತನಕ ನಡೆಯುವ ಈ ಕಾರ್ಯಕ್ರಮದಲ್ಲಿ ಬಂಟ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾವು ಹೇಮನಾಥ ಶೆಟ್ಟಿ ವಿನಂತಿಸಿದರು.
ಕಾರ್ಯಕ್ರಮದ ವಿವರ
ಜು.೧೨ ರಂದು ಬೆಳಿಗ್ಗೆ ೯.೩೦ಕ್ಕೆ ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷ ಸಹಕಾರರತ್ನ ಸವಣೂರು ಕೆ.ಸೀತಾರಾಮ ರೈಯವರು ಧ್ವಜಾರೋಹಣ ಮಾಡಲಿದ್ದಾರೆ. ಪುತ್ತೂರು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿರ್ದೇಶಕ ಅರಿಯಡ್ಕ ಚಿಕ್ಕಪ್ಪ ನಾಕ್ರವರು ಚಾವಡಿ ಮದಿಪು ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ. ಬೆಳಿಗ್ಗೆ ೧೦ ಗಂಟೆಗೆ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿ.ಎ ಅಶೋಕ್ ಶೆಟ್ಟಿ ಸಭಾ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ಕುಮಾರ್ ರೈ ಮಾಲಾಡಿಯವರು ಸನ್ಮಾನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಶಾಸಕ ಅಶೋಕ್ ಕುಮಾರ್ ರೈಯವರು ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಿದ್ದಾರೆ. ಬೆಂಗಳೂರು ಬಂಟರ ಸಂಘದ ವಿದ್ಯಾರ್ಥಿ ವೇತನ ಮತ್ತು ಪ್ರಶಸ್ತಿ ಸಮಿತಿಯ ಅಧ್ಯಕ್ಷ ಉಮೇಶ್ ಕುಮಾರ್ ಶೆಟ್ಟಿಯವರು ಮುಖ್ಯ ಅತಿಥಿಯಾಗಿದ್ದು, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ರಂಗೋಲಿ ಹಾಗೂ ಬೆಂಗಳೂರು ಬಂಟರ ಸಂಘದ ಜೊತೆ ಕಾರ್ಯದರ್ಶಿ ಜಯಶ್ರೀ ಸಿ. ರೈಯವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ತಾಲೂಕು ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಬಂಟರ ಸಂಘದ ಮಾಜಿ ಅಧ್ಯಕ್ಷರುಗಳಾದ ಜಗನ್ನಾಥ ರೈ ಮಾದೋಡಿ, ಲಕ್ಷ್ಮಿನಾರಾಯಣ ಶೆಟ್ಟಿ ಅರಿಯಡ್ಕ, ದಯಾನಂದ ರೈ ಮನವಳಿಕೆಗುತ್ತು, ಬೂಡಿಯಾರ್ ರಾಧಾಕೃಷ್ಣ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಹ ಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ, ಯುವ ಬಂಟರ ವಿಭಾಗದ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವು ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಅಧ್ಯಕ್ಷ ಪವನ್ ಶೆಟ್ಟಿ ಕಂಬಳತ್ತಡ್ಡರವರುಗಳು ಭಾಗವಹಿಸಲಿದ್ದಾರೆ ಎಂದು ಕಾವು ಹೇಮನಾಥ ಶೆಟ್ಟಿ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ ಸ್ವಾಗತಿಸಿದರು. ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ವಂದಿಸಿದರು. ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ, ಬಂಟರ ಸಂಘದ ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಸಾಜ ಹಾಗೂ ನಿರ್ದೇಶಕ ರವಿಪ್ರಸಾದ್ ಶೆಟ್ಟಿ ಬನ್ನೂರು ಉಪಸ್ಥಿತರಿದ್ದರು.
12 ಮಂದಿ ವಿವಿಧ ಕ್ಷೇತ್ರಗಳ ಸಾಧಕರಿಗೆ ವಿಶೇಷ ಸನ್ಮಾನ
ಪರವೂರಿನಲ್ಲಿ ಇರುವ ಮೂರು ಮಂದಿ ಸಾಧಕರುಗಳಾದ ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಬಿಎನ್ವೈಎಸ್-ಯುಜಿ ಮತ್ತು ಪಿಜಿ ಅಧ್ಯಯನ ಮಂಡಳಿ ಅಧ್ಯಕ್ಷರಾದ ಡಾ. ವನಿತಾ ಎಸ್.ಶೆಟ್ಟಿ, ರೈಸನ್ ನ್ಯೂಟ್ರಿಷನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಭಾರತೀಯ ಪಶು ವೈದ್ಯಕೀಯ ಮಂಡಳಿ ಸದಸ್ಯರಾದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಹಾಗೂ ಲಯನ್ಸ್ ಜಿಲ್ಲೆ 317 ಸಿ, ಇದರ ದ್ವಿತೀಯ ಉಪ ರಾಜ್ಯಪಾಲ ಲಯನ್ ಹರಿಪ್ರಸಾದ್ ರೈ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಎಸ್.ಬಿ.ಜಯರಾಮ ರೈ, ದ,ಕ.ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀನಿವಾಸ ರೈ ಕಡಬ, ಜೆಇಇ ಮೈನ್ಸ್, ಜೆಇಇ ಅಡ್ವಾನ್ಸ್ ನಲ್ಲಿ ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನಗೈದ ಭುವನ್ ರೈ ಕುಂಬ್ರ, ರಾಷ್ಟ್ರೀಯ ಮಟ್ಟದ ಜೆಎಎಮ್ ರ್ಯಾಂಕ್ ವಿಜೇತೆ ವೈಭವಿ ಶೆಟ್ಟಿ ಸಾರ್ಯಬೀಡು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಜ್ಞಾನ ರೈ, ಪಿಎಚ್ಡಿಯಲ್ಲಿ ಡಾಕ್ಟರೇಟ್ ಪಡೆದ ಉಪನ್ಯಾಸಕ ಕಿರಣ್ಚಂದ್ರ ರೈ ಕರ್ನೂರು ಹಾಗೂ ಸಿ.ಎ ಪರೀಕ್ಷೆಯಲ್ಲಿ ಭಾರತದಲ್ಲಿ 24ನೇ ರ್ಯಾಂಕ್ಗಳಿಸಿರುವ ನಿಶ್ಚಲ್ ರೈ ಡಿಂಬ್ರಿ ಅವರುಗಳನ್ನು ವಿಶೇಷವಾಗಿ ಸನ್ಮಾನಿಸಲಿದ್ದೆವೆ.
ಕಾವು ಹೇಮನಾಥ ಶೆಟ್ಟಿ, ಅಧ್ಯಕ್ಷರು ಬಂಟರ ಸಂಘ ಪುತ್ತೂರು ತಾಲೂಕು

ಒಂದೇ ವೇದಿಕೆಯಲ್ಲಿ 350ಕ್ಕೂ ಹೆಚ್ಚು ಮಂದಿಗೆ ಗೌರವಾರ್ಪಣೆ
ಪೆರ್ಮದ ಬಂಟೆರ್ ಕಾರ್ಯಕ್ರಮದಲ್ಲಿ ಬಂಟ ಸಮಾಜದ ೧೨ ಮಂದಿ ಸಾಧಕರನ್ನು ವಿಶೇಷವಾಗಿ ಸನ್ಮಾನಿಸುವ ಜೊತೆಗೆ ನೂತನವಾಗಿ ಆಯ್ಕೆಯಾದ ಸರಕಾರಿ ನಾಮನಿರ್ದೇಶಿತ ಸದಸ್ಯರು, ಸಹಕಾರಿ ಸಂಘದ ಅಧ್ಯಕ್ಷರು ಮತ್ತು ನಿರ್ದೇಶಕರುಗಳು, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಮತ್ತು ನಿರ್ದೇಶಕರುಗಳು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ವಿವಿಧ ಕ್ಷೇತ್ರದ ಸಾಧಕರು ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸೇರಿದಂತೆ ೩೫೦ ಕ್ಕೂ ಹೆಚ್ಚು ಮಂದಿಯನ್ನು ಗೌರವಿಸುವ ಅಪೂರ್ವವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಕಾವು ಹೇಮನಾಥ ಶೆಟ್ಟಿ ತಿಳಿಸಿದರು.