ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ 2024-25ನೇ ಸಾಲಿನಲ್ಲಿ ಎಸ್ಎಸ್ ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ.95ಕ್ಕಿಂತ ಹೆಚ್ಚು ಅಂಕ ಪಡೆದ ಪುತ್ತೂರು ತಾಲೂಕಿನ ಸಮಾಜ ಬಾಂಧವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಸಂಘದ ವಾರ್ಷಿಕ ಮಹಾಸಭೆಯು ಆ.3ರಂದು ನಡೆಯಲಿದ್ದು ಈ ಸಂದರ್ಭ 2024-25ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.95 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜಬಾಂಧವ ಪುತ್ತೂರು ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮ ನಡೆಯಲಿದೆ.
ಅರ್ಹ ವಿದ್ಯಾರ್ಥಿಗಳು ತಮ್ಮ ಅಂಕ ಪಟ್ಟಿ ಮತ್ತು ಆಧಾರ್ ಕಾರ್ಡ್ನ ಪ್ರತಿಯೊಂದಿಗೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿರುವ ಸಂಘದ ಕಚೇರಿಯಲ್ಲಿ ಅರ್ಜಿ ಸಲ್ಲಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ. ಜು.31ರ ಒಳಗಾಗಿ ಅರ್ಜಿಗಳನ್ನು ತಲುಪಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ಮೊ:9448328280, 9448311565 ಅನ್ನು ಸಂಪರ್ಕಿಸಬೇಕಾಗಿ ಸಂಘದ ಪ್ರಕಟಣೆ ತಿಳಿಸಿದೆ.