ಪುತ್ತೂರು: ಡಿ ಟಿವಿ ಕನ್ನಡ ವೆಬ್ನ್ಯೂಸ್ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿರುವುದಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಲು ರಾಜ್ಯ ಹೈಕೋರ್ಟ್ ನಿರಾಕರಿಸಿದೆ.
ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ಆರೋಪದಲ್ಲಿ ಡಿ ಟಿವಿ ಕನ್ನಡ ವೆಬ್ನ್ಯೂಸ್ ಪೋರ್ಟಲ್ ವಿರುದ್ದ ಜೂ.21ರಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 75/2025, ಕಲಂ: 240 ಬಿಎನ್ಎಸ್ ರಂತೆ ಪ್ರಕರಣ ದಾಖಲಾಗಿತ್ತು. ಸದ್ರಿ ಪ್ರಕರಣವನ್ನು ರದ್ದು ಮಾಡಲು ಹೈಕೋರ್ಟ್ಗೆ ಪುತ್ತೂರು ನಿವಾಸಿ ಅಜರುದ್ದೀನ್ ಎಂಬವರು ಅರ್ಜಿ ಸಲ್ಲಿಸಿದ್ದರು. ಆದರೆ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ನ್ಯಾಯವಾದಿ ಆಸ್ಮಾರವರು ವಾದ ಮಂಡನೆ ಮಾಡಿದ ಬಳಿಕ, ಪ್ರಕರಣದ ರದ್ದತಿಗಾಗಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅರ್ಜಿದಾರರು ಹಿಂತೆಗೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಮುಂದುವರಿಯಲಿದೆ ಎಂದು ದ.ಕ.ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.