ಪುತ್ತೂರು: ಭಾರತೀಯ ಜನತಾ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ, ಕುಟ್ರುಪ್ಪಾಡಿ ಮಹಾಶಕ್ತಿ ಕೇಂದ್ರದ ಸವಣೂರು- 65 ಬೂತ್ ಸಮಿತಿ ವತಿಯಿಂದ ಗುರುಪೂರ್ಣಿಮೆ ಅಂಗವಾಗಿ ಸವಣೂರು ಬೇರಿಕೆ ನಿವಾಸಿ, ಪುತ್ತೂರು ವಿವೇಕಾನಂದ ಮಹಾವಿದ್ಯಾಲಯ ಹಾಗೂ ಉಪ್ಪಿನಂಗಡಿ ಇಂದ್ರಪ್ರಸ್ಥ ಪ್ರೌಢಶಾಲೆಗಳಲ್ಲಿ ದೈಹಿಕಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಬಳಿಕ ಸ್ವಯಂ ನಿವೃತ್ತಿ ಪಡೆದು ಪ್ರಸ್ತುತ ಕೃಷಿ ಕಾರ್ಯ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಅನಿತಾ ಲಕ್ಷ್ಮಣ ಗೌಡ ಕೆಡೆಂಜಿ ಇವರಿಗೆ ಗುರುವಂದನೆ, ಗೌರವಾರ್ಪಣೆ ಕಾರ್ಯಕ್ರಮವನ್ನು ಅವರ ಮನೆಯಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ದ ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ , ಸವಣೂರು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್, ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಚೇತನ್ ಕೋಡಿಬೈಲು, ಬೂತ್ ಸಮಿತಿ ಅಧ್ಯಕ್ಷ ತೀರ್ಥರಾಮ ಕೆಡೆಂಜಿ, ಕಾರ್ಯದರ್ಶಿ ಸತೀಶ್ ಬಲ್ಯಾಯ, ಸಿ.ಎ ಬ್ಯಾಂಕ್ ನಿರ್ದೇಶಕ ಅಶ್ವಿನ್ ಎಲ್ ಶೆಟ್ಟಿ , ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಾವತಿ ಸುಣ್ಣಾಜೆ , ಇಂದಿರಾ ಬೇರಿಕೆ ಉಪಸ್ಥಿತರಿದ್ದರು