ಕಾವು: ಬುಶ್ರಾ ಅಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಗ್ರಹಣ ಮತ್ತು ಉದ್ಘಾಟನಾ ಸಮಾರಂಭವನ್ನು ಜು.9ರಂದು ಬುಶ್ರಾ ಆಡಿಟೋರಿಯಂ ನಲ್ಲಿ ನಡೆಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿದ್ಯಾ ಆರ್ ಗೌರಿ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿ ಸರಕಾರದ ಮಹತ್ವ ಮತ್ತು ವಿದ್ಯಾರ್ಥಿ ಪ್ರತಿನಿಧಿಗಳಿಗೆ ನಿರ್ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ಮಾತನಾಡಿದರು. ಸಂಸ್ಥೆಯ ಮುಖ್ಯ ಶಿಕ್ಷಕಿ ದೀಪಿಕಾ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಮಾಜ ಶಿಕ್ಷಕ ಚುನಾವಣಾ ನಿರ್ವಹಣಾಧಿಕಾರಿ ಉಮೇಶ್ ನಾಯ್ಕ ಮಂತ್ರಿಮಂಡಲದ ರಚನೆಯ ಬಗ್ಗೆ ಸವಿವರವಾಗಿ ವಿವರಿಸಿದರು. ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಅಜೀಜ್ ವಿದ್ಯಾರ್ಥಿಗಳಿಗೆ ಶುಭಹಾರೈಸಿ ಅಧ್ಯಕ್ಷೀಯ ಭಾಷಣವನ್ನು ಮಾಡಿದರು. ಮುಖ್ಯಶಿಕ್ಷಕಿ ದೀಪಿಕಾ ಸ್ವಾಗತಿಸಿ, ಶೈಕ್ಷಣಿಕ ಸಲಹೆಗಾರರಾದ ಕೃಷ್ಣ ಪ್ರಸಾದ್ ವಂದಿಸಿದರು. ಹಿರಿಯ ಶಿಕ್ಷಕಿ ಹೇಮಲತಾ ಕಜೆ ಗದ್ದೆ ಕಾರ್ಯಕ್ರಮವನ್ನು ನಿರೂಪಿಸಿದರು.