ಪುತ್ತೂರು: ತಾ.ಪಂ ಮಾಜಿ ಸದಸ್ಯೆ ರೇಖಾ ನಾಗರಾಜ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಜು.9ರಂದು ಜಯರಾಜ್ ಶೆಟ್ಟಿ ಅನಿಲೆ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ಅವರು ಪಕ್ಷದ ಧ್ವಜ ನೀಡಿ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಬನ್ನೂರು, ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು ಹಾಗೂ,ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.