ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ವತಿಯಿಂದ ವಿಟ್ಲ ಪೊಲೀಸ್ ಠಾಣಾ ಗೃಹರಕ್ಷಕದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

0

ಸಾರ್ವಜನಿಕರು ತಮ್ಮ ಮೇಲೆ ಇಟ್ಟಿರುವ ಗೌರವಕ್ಕೆ ಧಕ್ಕೆಯಾಗದಂತೆ ಕರ್ತವ್ಯ ನಿರ್ವಹಿಸಿ: ಅರುಣ್ ಕುಮಾರ್ ಪುತ್ತಿಲ

ವಿಟ್ಲ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಇದರ ವತಿಯಿಂದ ವಿಟ್ಲ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಗೃಹರಕ್ಷಕದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ ಸಮಾರಂಭ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಸಾರ್ವಜನಿಕ ದುರ್ಗಾ ಪೂಜಾ ಸಮಿತಿ ಅಧ್ಯಕ್ಷರಾದ ನ್ಯಾಯವಾದಿ ಶ್ರೀಕೃಷ್ಣ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು.

ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲರವರು ಮಾತನಾಡಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿರುವ ಗೃಹರಕ್ಷಕದಳ ಸಿಬ್ಬಂದಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮುಂದೆಯೂ ಅಗತ್ಯವಿದ್ದರೆ ನಮ್ಮ ಟ್ರಸ್ಟ್ ನಿಮಗೆ ಯಾವತ್ತೂ ಸಹಕಾರ ನೀಡುತ್ತದೆ ಎಂದರು. ಸಾರ್ವಜನಿಕರು ನಿಮ್ಮ ಮೇಲೆ ಅಪಾರ ಗೌರವ ಹೊಂದಿದ್ದು ಅವರ ಅಭಿಮಾನಕ್ಕೆ ದಕ್ಕೆಯಾಗದಂತೆ ಕರ್ತವ್ಯ ನಿರ್ವಹಿಸಬೇಕೆಂದು ನಮ್ಮೆಲ್ಲರ ಆಶಯವಾಗಿದೆ.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲದಲ್ಲಿ ಸಾಮಾಜಿಕ, ಧಾರ್ಮಿಕ ಕೆಲಸ ಕಾರ್ಯದಲ್ಲಿ ಮುಂಚೂಣಿಯಲ್ಲಿದು ಜನರ ಅಭಿಮಾನಕ್ಕೆ ಪಾತ್ರವಾಗಿದೆ. ಮುಂದಿನ ದಿನಗಳಲ್ಲೂ ವಿಟ್ಲ ಭಾಗದಲ್ಲಿ ಸಮಾಜಮುಖಿ ಕೆಲಸ ಮಾಡಲು ವಿಟ್ಲ ಪಂಚಲಿಂಗೇಶ್ವರ ದೇವರು ಶಕ್ತಿ ನೀಡಲಿ ಎಂದರು. ವೇದಿಕೆಯಲ್ಲಿ ಪ್ರಮುಖರಾದ ರಘುನಾಥ್ ರೈ, ಹರೀಶ್ ಮರುವಾಳ, ಉಮೇಶ್ ಕೊಡಿಬೈಲು, ಶ್ರೀಕೃಷ್ಣ ವಿಟ್ಲ, ಕೃಷ್ಣಯ್ಯ ಬಲ್ಲಾಳ್ , ಪಟ್ಟಣ ಪಂಚಾಯತ್ ಸದಸ್ಯರಾದ ಅಶೋಕ್ ಶೆಟ್ಟಿ ಸೇರಿದಂತೆ ಟ್ರಸ್ಟ್ ಮತ್ತು ಪೂಜಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here