ಪುತ್ತೂರು:ಯಶಸ್ವಿನಿ ವಿಮಾ ಸೌಲಭ್ಯದಡಿಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸೌಲಭ್ಯವನ್ನು ಒದಗಿಸುವಂತೆ ಸಹಕಾರ ಸಚಿವ ಟಿ ರಾಜಣ್ಣ ಅವರಿಗೆ ಶಾಸಕ ಅಶೋಕ್ ರೈ ಮನವಿ ಸಲ್ಲಿಸಿದರು.
ಜು.10ರಂದು ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕ ಅಶೋಕ್ ರೈ ಅವರು ಸಹಕಾರ ಇಲಾಖೆಯ ಯಶಸ್ವಿನಿ ವಿಮಾ ಸೌಲಭ್ಯವು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿಲ್ಲದಿರುವುದರಿಂದ ವಿಮೆ ಹೊಂದಿರುವವರಿಗೆ ಸಮಸ್ಯೆಯಾಗಿದ್ದು ಇದನ್ನು ಸರಿಪಡಿಸಿ ಪುತ್ತೂರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸೌಲಭ್ಯ ಒದಗಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಈ ವ್ಯವಸ್ಥೆ ಜಾರಿಯಾದಲ್ಲಿ ಅಸಹಾಯಕ ನೂರಾರು ಬಡವರಿಗೆ ಪ್ರಯೋಜನವಾಗಲಿದೆ ಎಂದು ಸಚಿವರಿಗೆ ಶಾಸಕರು ಮನವರಿಕೆ ಮಾಡಿದರು.ಈ ವೇಳೆ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮುರಳೀದರ್ ರೈ ಮಠಂತಬೆಟ್ಟು, ಹಿರಿಯ ಕಾಂಗ್ರೆಸ್ ಮುಖಂಡ ಶಿವರಾಮ ಆಳ್ವ ಬಳ್ಳಮಜಲು ಉಪಸ್ಥಿತರಿದ್ದರು.