ಮಂಗಳೂರು: ಲಂಚ‌ಕ್ಕೆ ಬೇಡಿಕೆ : ಟ್ರಾಫಿಕ್ ಹೆಡ್‌ಕಾನ್‌ಸ್ಟೇಬಲ್‌ ಲೋಕಾಯುಕ್ತ ಬಲೆಗೆ!

0

ಮಂಗಳೂರು: ಕಾರು ಮತ್ತು ಸ್ಕೂಟರ್ ಮಧ್ಯೆ ನಡೆದ ಅಪಘಾತಕ್ಕೆ ಸಂಬಂಧಿಸಿ ಕಾರನ್ನು ಠಾಣೆಯಿಂದ ಬಿಡಿಸಿಕೊಳ್ಳಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ಕದ್ರಿ ಟ್ರಾಫಿಕ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ತಸ್ಲೀಂ ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.‌

ನಂತೂರು ಸರ್ಕಲ್‌ನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ತಸ್ಲಿಂ, ಕಾರು, ಕಾರಿನ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ ಸೂಚಿಸಿದ್ದು, ಅದರಂತೆ ಕಾರಿನ ಮಾಲಕರು ಎಲ್ಲವನ್ನೂ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಬಳಿಕ ತನ್ನ ಕಾರನ್ನು ಪೊಲೀಸ್ ಠಾಣೆಯಿಂದ ಬಿಡಿಸಿಕೊಳ್ಳಲು ಹೋದಾಗ ಹೆಡ್‌ ಕಾನ್ಸ್‌ಟೇಬಲ್ ತಸ್ಲಿಂ 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಂದು ಆರೋಪಿಸಲಾಗಿದೆ.

ಕಾರಿನ ಮಾಲಕರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಕದ್ರಿ ಠಾಣೆಯ ಇಬ್ಬರು‌ ಹೆಡ್‌ಕಾನ್‌ಸ್ಟೇಬಲ್‌ ಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಇಂದು ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ತಸ್ಲಿಂನನ್ನು ಬಂಧಿಸಿದ್ದಾರೆ.

ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ರವರು ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳ ಜೊತೆ ಕಾರ್ಯಾಚರಣೆ ಪಾಲ್ಗೊಂಡಿರುತ್ತಾರೆ.

LEAVE A REPLY

Please enter your comment!
Please enter your name here