ಕಾಣಿಯೂರು: ಬೆಳಂದೂರು ಗ್ರಾಮದ ಬಿಜೆಪಿ ಬೂತ್ 73ರಲ್ಲಿ ಗುರು ಪೂರ್ಣಿಮೆ ಅಂಗವಾಗಿ ಗುರುವಂದನಾ ಕಾರ್ಯಕ್ರಮವು ಜು.10ರಂದು ನಡೆಯಿತು.
ಈ ಸಂದರ್ಭದಲ್ಲಿ ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಬಳಿಕ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಸೇವೆಯನ್ನು ಆರಂಭಿಸಿದ ಕೃಷ್ಣಪ್ಪ ಗೌಡ ಕಂಡೂರು ಅವರನ್ನು ಗೌರವಿಸಲಾಯಿತು. ಹಿರಿಯ ಕಾರ್ಯಕರ್ತರಾದ ಜನಾರ್ದನ ಆಚಾರ್ಯ ಕಾಣಿಯೂರು ಮಾತನಾಡಿ, ಗುರುಗಳು ನಮ್ಮ ಬದುಕಿನ ದಾರಿದೀಪಗಳು. ಗುರುಗಳು ಜ್ಞಾನದ ಬೆಳಕನ್ನು ನೀಡಿ, ನಮ್ಮ ಜೀವನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಆ ಮೂಲಕ ಕೃಷ್ಣಪ್ಪ ಗೌಡರವರ ಸೇವೆಯನ್ನು ಸ್ಮರಿಸಿಕೊಳ್ಳುವುದು ನಮ್ಮ ಕರ್ತವ್ಯ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಚಂದ್ರಯ್ಯ ಆಚಾರ್ಯ ಅಬೀರ, ಕಾರ್ಯದರ್ಶಿ ಶೇಖರ ಅಬೀರ, ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಬೆಳಂದೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಜಯಂತ ಅಬೀರ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಉದಯ ರೈ ಮಾದೋಡಿ, ಜಿ.ಪಂ ಮಾಜಿ ಸದಸ್ಯೆ ಪ್ರಮೀಳಾ ಜನಾರ್ದನ, ಗ್ರಾಮ ಪಂಚಾಯತ್ ಸದಸ್ಯೆ ಗೌರಿ ಮಾದೋಡಿ, ಪ್ರಮುಖರಾದ ಜನಾರ್ದನ ಆಚಾರ್ಯ ಕಾಣಿಯೂರು, ಚಂಪಾ ಕುಶಾಲಪ್ಪ ಅಬೀರ, ಬಾಲಚಂದ್ರ ಅಬೀರ ಹಾಗೂ ಲೀಲಾವತಿ ಕಂಡೂರು ಮತ್ತಿತರರು ಉಪಸ್ಥಿತರಿದ್ದರು. ಬೆಳಂದೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಜಯಂತ ಅಬೀರ ಸ್ವಾಗತಿಸಿ, ವಂದಿಸಿದರು.