ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆಯ ಬಗ್ಗೆ ಬೆಂಗಳೂರಿನ ವಿಧಾನ ಸೌಧದದಲ್ಲಿ ನಡೆದ ಗಣಿಗಾರಿಕೆ ಬಗೆಗಿನ ಸಭೆಯಲ್ಲಿ ದ.ಕ.ಜಿಲ್ಲಾ ಮರಳು ವ್ಯಾಪಾರಸ್ಥರ ಸಂಘದ ವತಿಯಿಂದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಮನವಿ ಮಾಡಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿ ಸಚಿವರು ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಚರ್ಚಿಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ನಾನ್ಸಿಆರ್ಝೆಡ್ ಮರಳು ಗುತ್ತಿಗೆದಾರರ ಸಂಘದ ಅಧ್ಯಕ್ಷ ದಿನೇಶ್ ಮೆದು, ಕಾರ್ಯದರ್ಶಿ ಚಂದ್ರಹಾಸ್ ಪಳ್ಳಿಪಾಡಿ, ಪದಾಧಿಕಾರಿಗಳಾದ ಸುರೇಶ್ ಕುಂಡಡ್ಕ, ಮೋನು ಪಿಲಿಗೂಡು, ಲತೀಪ್ ಅರಫಾ ಮತ್ತಿತರರು ಉಪಸ್ಥಿತರಿದ್ದರು.