ನರಿಮೊಗರು: ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಜು.10ರಂದು ಗುರುಪೂರ್ಣಿಮೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ, ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರ್, ಶಾಲಾ ಮುಖ್ಯೋಪಾಧ್ಯಾಯರಾದ ಪ್ರಸನ್ನ ಕೆ ವೇದಿಕೆಯಲ್ಲಿದ್ದರು.

ಶಾಲಾ ಮುಖ್ಯೋಪಾಧ್ಯಾಯರು ಗುರು ಪೂರ್ಣಿಮೆಯ ವಿಶೇಷತೆಯನ್ನು ತಿಳಿಸಿದರು. ಸಂಚಾಲಕರು ಮಾತನಾಡಿ, ನಮಗೆ ದಾರಿ ತೋರಿಸುವವರು ಹಾಗೂ ನಮ್ಮ ತಪ್ಪುಗಳನ್ನು ತಿದ್ದಿ ಸರಿಯಾದ ದಾರಿಗೆ ಕರೆದುಕೊಂಡು ಹೋಗುವವರು ಗುರು, ಅದಕ್ಕಾಗಿ ಗುರುಹಿರಿಯರಿಗೆ ಗೌರವ ಕೊಟ್ಟು ಸನ್ಮಾರ್ಗದಲ್ಲಿ ನಡೆಯಿರಿ ಎಂದರು.
ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ ವ್ಯಾಸರ ಕೊಡುಗೆಯನ್ನು ತಿಳಿಸುತ್ತಾ, ಗುರು ಎಂದರೆ ಜ್ಞಾನ. ಜ್ಞಾನ ಎಂದರೆ ಬೆಳಕು. ಮನಸ್ಸಿನ ಕಲ್ಮಶವನ್ನು ತೆಗೆದಾಗ ಜ್ಞಾನವನ್ನು ಪಡೆಯಲು ಸಾಧ್ಯ ಜೀವನದಲ್ಲಿ ಯಶಸ್ಸು ನಿಮ್ಮದಾಗಲಿ ಎಂದು ಹಾರೈಸುತ್ತಾ ಸ್ಪೂರ್ತಿಯ ಮಾತುಗಳನ್ನಾಡಿ ಗುರುಪೂರ್ಣಿಮೆಯ ಶುಭಾಶಯ ತಿಳಿಸಿದರು. ಬಳಿಕ ಜಗದ್ಗುರುಗಳಾದ ಶ್ರೀ ವೇದವ್ಯಾಸ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃoದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸೌಮ್ಯ ಕಾರ್ಯಕ್ರಮ ನಿರೂಪಿಸಿ, ಉಷಾ ಸ್ವಾಗತಿಸಿದರು. ಭವಿತಾರವರು ಧನ್ಯವಾದ ಸಮರ್ಪಿಸಿದರು.