ಪಟ್ಟೆ: ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ ಜು.10ರಂದು ನಡೆಯಿತು.
ಸನಾತನ ಪರಂಪರೆಯ ಶ್ರೇಷ್ಠ ಮಹಾಗುರುಗಳಾದ ಶ್ರೀ ವೇದವ್ಯಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟೆ ವಿದ್ಯಾ ಸಂಸ್ಥೆಗಳ ಸಂಚಾಲಕ ವಿಘ್ನೇಶ್ ಹಿರಣ್ಯ ವಹಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಗುರು ರಾಜಗೋಪಾಲ ಯನ್ ಗುರು ಪೂರ್ಣಿಮೆ ಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಶಾಲಾ ವಿದ್ಯಾರ್ಥಿಗಳು ಗುರು ಪೂರ್ಣಿಮೆಯ ಮಹತ್ವದ ಬಗ್ಗೆ ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರೌಢಶಾಲೆಯ ಮುಖ್ಯಗುರು ಸುಮನ ಬಿ ಗುರುಪೂರ್ಣಿಮೆಯ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿ ಎಲ್ಲರನ್ನೂ ಸ್ವಾಗತಿಸಿದರು. ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಎಲ್ಲಾ ಗುರುವೃಂದದವರು ವೇದವ್ಯಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗುರುಗಳ ಆಶೀರ್ವಾದವನ್ನು ಪಡೆದರು. ಪ್ರಾಥಮಿಕ ಶಾಲಾ ಮುಖ್ಯಗುರು ರಾಜಗೋಪಾಲ ಯನ್ ವಂದಿಸಿದರು. ಎಲ್ಲಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
