ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ರಮೇಶ್ ರೈ ಡಿಂಬ್ರಿ ನೇಮಕಗೊಂಡಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರ ಆದೇಶ ಹಾಗೂ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರ ಶಿಫಾರಸ್ಸಿನಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವರವರು ನೇಮಕಗೊಳಿಸಿ ಆದೇಸಿದ್ದಾರೆ.
ಆರ್ಯಾಪು ಗ್ರಾ.ಪಂ ಮಾಜಿ ಸದಸ್ಯರಾಗಿರುವ ರಮೇಶ್ ರೈಯವರು ಯುವ ಬಂಟರ ಸಂಘದ ಅಧ್ಯಕ್ಷರಾಗಿ, ಬಂಟರ ಸಂಘದ ಕೋಶಾಧಿಕಾರಿಯಾಗಿ, ನಿರ್ದೇಶಕರಾಗಿ, ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಇವರು ಪ್ರಸ್ತುತ ಬಂಟರ ಸಂಘದ ಉಪಾಧ್ಯಕ್ಷರಾಗಿ, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್‌ನ ಸದಸ್ಯರಾಗಿರುತ್ತಾರೆ.