ರೋಟರಿ ಪುತ್ತೂರು ಈಸ್ಟ್ ನಿಂದ ಗುರುಪೂರ್ಣಿಮಾ

0

ಪುತ್ತೂರು: ಅಂತರ್ರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಈಸ್ಟ್ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ ಜರಗಿತು.

ಗುರು ಪರಂಪರೆಯಂತೆ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷ ಡಾ.ರವಿಪ್ರಕಾಶ್ ಕಜೆರವರ ಪತ್ನಿ, ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ವಿಜಯ ಸರಸ್ವತಿರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕ್ಲಬ್ ಅಧ್ಯಕ್ಷ ಶಶಿಧರ್ ಕಿನ್ನಿಮಜಲುರವರು ಮಾತನಾಡಿ, ಗುರು ಪರಂಪರೆಯಂತೆ ಗುರು ಪೂರ್ಣಿಮಾ ದಿನ ಗುರುವನ್ನು ಗೌರವಿಸುವ ಮೂಲಕ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಾಕ್ಷಿಯಾದೆವು ಎಂದು ಹೇಳಿ  ಶುಭ ಹಾರೈಸಿದರು. ಕಾರ್ಯದರ್ಶಿ ನವೀನ್ ರೈ ಪಂಜಳ ಸ್ವಾಗತಿಸಿದರು. ಕೋಶಾಧಿಕಾರಿ ಜಯಂತ್ ಬಾಯಾರು,  ನಿಕಟಪೂರ್ವ ಅಧ್ಯಕ್ಷ ಡಾ.ರವಿಪ್ರಕಾಶ್ ಕಜೆ, ಸದಸ್ಯರಾದ ನಿಶಾಂತ್ ರೈ, ಜೀವನ್ ಗೋವಿಯಸ್, ಕೇಶವ ಪೂಜಾರಿ ಬೆದ್ರಾಳ, ರವಿಕುಮಾಋ ರೈರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here