ಪುತ್ತೂರು:ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷರಾಗಿ ಮಹಾಲಿಂಗ ನಾಯ್ಕ ನರಿಮೊಗರುರವರು ದ್ವಿತೀಯ ಬಾರಿಗೆ ಪುನರಾಯ್ಕೆಗೊಂಡಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈರವರ ಶಿಫಾರಸ್ಸಿನ ಮೇರೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಜಿಲ್ಲಾ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷರಾದ ನಾರಾಯಣ ನಾಯ್ಕರವರ ಆದೇಶದಂತೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವರವರು ನೇಮಕಗೊಳಿಸಿರುತ್ತಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ ಪರವಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಮನೆ ಮನೆಗೆ ತೆರಳಿ ಶಾಸಕ ಅಶೋಕ್ ಕುಮಾರ್ ರೈರವರ ಗೆಲುವಿನಲ್ಲಿ ಪರಿಶಿಷ್ಟ ಪಂಗಡ ಪ್ರಮುಖ ಪಾತ್ರ ವಹಿಸಿತ್ತು.