ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಹಿರಿಯ ವಿದ್ಯಾರ್ಥಿ ಸಂಘದ ಸಭೆ ಜುಲೈ 12ರಂದು ಅಪರಾಹ್ನ 2.30ಕ್ಕೆ ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿದೆ.
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿಶಿರಾಮ ಬೋರ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸಂಸ್ಥೆಯ ಹಿರಿಯ ವಿದ್ಯಾರ್ಥಿ, ಸಾಪ್ಟ್‌ವೇರ್ ತಂತ್ರಜ್ಞ ಕೃಷ್ಣ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅಜಯ ರಾಮ್, ವಿದ್ಯಾಸಂಸ್ಥೆಗಳ ಪ್ರಾಚಾರ್ಯರಾದ ಸತ್ಯಜಿತ್ ಉಪಾಧ್ಯಾಯ ಹಾಗೂ ಗಣೇಶ್ ಪ್ರಸಾದ್ ಡಿ.ಎಸ್. ಉಪಸ್ಥಿತರಿರುವರು. ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಹಿರಿಯ ವಿದ್ಯಾಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.