ಸಾಧಕರಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ
ಪುತ್ತೂರು: ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ಮಹಿಳಾ,ಯುವ ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಸಹಕಾರದೊಂದಿಗೆ ಜು.12 ರಂದು ಬೆಳಿಗ್ಗೆ 9 ರಿಂದ ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ “ಪೆರ್ಮದ ಬಂಟೆರ್” ಸಾಧಕರಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ಕಾರ್‍ಯಕ್ರಮ ನಡೆಯಲಿದೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್‍ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳೀಕೆ ಹಾಗೂ ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಸಾಜ ತಿಳಿಸಿದ್ದಾರೆ.