ಕಡಬ: ಇಲ್ಲಿನ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಜು.12ರಂದು ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ಪರಿಕ್ಷಾರ್ಥಿ) ಹಸ್ತ ಶೆಟ್ಟಿಯವರು ಉದ್ಘಾಟಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದತೆ ವಿಷಯದ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಸಭೆಯ ಅಧ್ಯಕ್ಷತೆಯನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ. ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ದ.ಕ.ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಬೆಥನಿ ಪ.ಪೂ.ಕಾಲೇಜಿನ ನಿರ್ದೇಶಕ ರೆ.ಫಾ.ಆಂಟನಿ ಓಐಸಿ ಉಪಸ್ಥಿತರಿರಲಿದ್ದಾರೆ.
ಬೆಥನಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ಜಾರ್ಜ್ ಟಿ.ಎಸ್. ವೇದಿಕೆಯಲ್ಲಿ ಗೌರವ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಪತ್ರಿಕಾ ವಿತರಕ ಜಯಕುಮಾರ್ ಜೈನ್ ಕಲ್ಲುಗುಡ್ಡೆ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.