ನೆಲ್ಯಾಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ, ಉಜಿರೆ ಇದರ ಆಡಳಿತಕ್ಕೊಳಪಟ್ಟ ಕಾಂಚನ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಜು.14ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿ, ಆಶೀರ್ವಚನ ನೀಡಲಿದ್ದಾರೆ. ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ಕುಮಾರ್ ರೈ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ರೋಹಿಣಿ ಸುಬ್ಬರತ್ನಂ ಕಾಂಚನ, ಬಜತ್ತೂರು ಗ್ರಾ.ಪಂ.ಅಧ್ಯಕ್ಷ ಗಂಗಾಧರ ಗೌಡ ಪಿ.ಎನ್. ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.