ನಿಡ್ಪಳ್ಳಿ: ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇಲ್ಲಿ ಆ.8 ರಂದು ನಡೆಯುವ 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜು.11 ರಂದು ದೇವಸ್ಥಾನದಲ್ಲಿ ನಡೆಯಿತು.
ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ಅಜಿತ್ ರೈ ನುಳಿಯಾಲು ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಪೂಜಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ದೇವಸ್ಥಾನದ ಪ್ರಧಾನ ಅರ್ಚಕ ನವೀನ್ ಹೆಬ್ಬಾರ್, ಅರ್ಚಕರ ಸಹಾಯಕ ವಿಶ್ವೇಶ್ವರ ಭಟ್ ಮುಂಡೂರು, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ರೈ ಕೊಪ್ಪಳ, ಮಾಜಿ ಅಧ್ಯಕ್ಷ ನಾಗೇಶ ಗೌಡ ಪುಳಿತ್ತಡಿ, ಸದಸ್ಯ ರಾಮಚಂದ್ರ ಮಣಿಯಾಣಿ ಬೊಳುಂಬುಡೆ, ಪೂಜಾ ಸಮಿತಿ ಗೌರವಾಧ್ಯಕ್ಷೆ ಮಮತಾ ಭಟ್ ದೇವಸ್ಯ, ಅಧ್ಯಕ್ಷೆ ಭಾರತಿ ಶಿವಪ್ಪ ಪೂಜಾರಿ ನುಳಿಯಾಲು, ಕಾರ್ಯದರ್ಶಿ ದಿವ್ಯಾ ಸಿ.ಎಚ್ ಚೆಲ್ಯರಮೂಲೆ, ಕೋಶಾಧಿಕಾರಿ ಸೌಮ್ಯ ಜೆ.ರೈ ಕೊಳಂಬೆತ್ತಿಮಾರು, ಪಾಣಾಜೆ ಸಿ.ಎ ಬ್ಯಾಂಕ್ ನಿರ್ದೇಶಕ ರಾಧಾಕೃಷ್ಣ ರೈ ಪಟ್ಟೆ, ಶ್ರೀನಿವಾಸ ಭಟ್ ದೇವಸ್ಯ ಹಾಗೂ ಪೂಜಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಕುಮಾರ ನರಸಿಂಹ ಭಟ್ ವಂದಿಸಿದರು.