ಶ್ರೀ ಲಕ್ಷ್ಮೀ ನಾರಾಯಣ ಅನುದಾನಿತ ಹಿ.ಪ್ರಾ. ಶಾಲೆ ಜು.14ರಂದು ನೂತನ ಕಟ್ಟಡದ ಉದ್ಘಾಟನೆ

0

ಉಪ್ಪಿನಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ (ರಿ) ಉಜಿರೆ ಇದರ ಆಡಳಿತಕ್ಕೊಳಪಟ್ಟ ಶ್ರೀ ಲಕ್ಷ್ಮೀ ನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಾಂಚನ ಇದರ ನೂತನ ಕಟ್ಟಡದ ಉದ್ಘಾಟನೆ ಜು.14ರಂದು ಬೆಳಗ್ಗೆ 10:30ಕ್ಕೆ ನಡೆಯಲಿದೆ.


ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಕಟ್ಟಡವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಕ್ಷೇತ್ರ ಶಿಕ್ಷಣಾಧಿಕಾರಿ ಲೊಕೇಶ್ ಎಸ್.ಆರ್., ರೋಹಿಣಿ ಸುಬ್ಬರತ್ನಂ ಕಾಂಚನ, ಬಜತ್ತೂರು ಗ್ರಾ.ಪಂ. ಅಧ್ಯಕ್ಷ ಗಂಗಾಧರ ಗೌಡ ಪಿ.ಎನ್. ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here