ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ-ವಿದ್ಯಾರ್ಥಿ ವೇತನ ವಿತರಣೆ-ಪದಾಧಿಕಾರಿಗಳ ಆಯ್ಕೆ

0

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಕೋಡಿಂಬಾಡಿ ಗ್ರಾಮ ಸಮಿತಿ ಮತ್ತು ಮಹಿಳಾ ಗ್ರಾಮ ಸಮಿತಿಯ ಮಹಾಸಭೆ ಹಾಗೂ ವಿದ್ಯಾರ್ಥಿ ವಿತರಣಾ ಕಾರ್ಯಕ್ರಮ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾದ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಅವರ ಅಧ್ಯಕ್ಷತೆಯಲ್ಲಿ ಕೋಡಿಂಬಾಡಿ ಹಿ.ಪ್ರಾ.ಶಾಲಾ ಸಭಾಂಗಣದಲ್ಲಿ ನಡೆಯಿತು.

ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಕಾರ್ಯದರ್ಶಿ ಚಿದಾನಂದ ಸುವರ್ಣ, ಜತೆ ಕಾರ್ಯದರ್ಶಿ ದಯಾನಂದ ಕರ್ಕೇರ, ಕೋಶಾಧಿಕಾರಿ ಬಿ.ಟಿ. ಮಹೇಶ್ಚಂದ್ರ ಸಾಲ್ಯಾನ್, ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಕೋಲಾಡಿ, ಬಿಲ್ಲವ ಸಂಘದ ವಲಯ ಸಂಚಾಲಕರೂ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷರೂ ಆಗಿರುವ ಅಣ್ಣಿ ಪೂಜಾರಿ ಬಿರ್ನ ಹಿತ್ತಿಲು, ಗ್ರಾಮ ಸಮಿತಿಯ ಗೌರವಾಧ್ಯಕ್ಷರಾದ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಜಯಾನಂದ, ಕೋಡಿಂಬಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ದೇವಾನಂದ, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಪಲ್ಲತ್ತಾರು, ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಕುಮಾರನಾಥ ಎಸ್., ಯಮುನಾ ಡೆಕ್ಕಾಜೆ, ಕೋಡಿಂಬಾಡಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಪೂಜಾರಿ ನಿಡ್ಯ, ಶ್ರೀಧರ ಪೂಜಾರಿ ಕೆದಿಕಂಡೆ, ರಮೇಶ್ ನಿಡ್ಯ ಮತ್ತಿತರರು ಭಾಗವಹಿಸಿದ್ದರು.

ಮಹಾಸಭೆಯ ಬಳಿಕ ಗ್ರಾಮ ಸಮಿತಿ ಮತ್ತು ಮಹಿಳಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗ್ರಾಮ ಸಮಿತಿಯ ಗೌರವಾಧ್ಯಕ್ಷರಾಗಿ ಜಯಾನಂದ ಕೆ, ಅಧ್ಯಕ್ಷರಾಗಿ ಉಲ್ಲಾಸ್ ಕೋಟ್ಯಾನ್, ಕಾರ್ಯದರ್ಶಿಯಾಗಿ ರಮೇಶ್ ಕೆ., ಕೋಶಾಧಿಕಾರಿಯಾಗಿ ವಿಜಯ ಚೀಮುಳ್ಳು, ಜತೆ ಕಾರ್ಯದರ್ಶಿಯಾಗಿ ಉಮೇಶ್ ಡೆಕ್ಕಾಜೆ, ಉಪಾಧ್ಯಕ್ಷರಾಗಿ ಉಗ್ಗಪ್ಪ ಪೂಜಾರಿ ಪರನೀರು ಮತ್ತು ಚಂದ್ರಶೇಖರ ಸನಿಲ್ ಹೆಗ್ಡೆಹಿತ್ಲು ಅವರನ್ನು ಆಯ್ಕೆ ಮಾಡಲಾಯಿತು.

ಮಹಿಳಾ ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಪ್ರೇಮಲತಾ ದೇವದಾಸ್ ಡೆಕ್ಕಾಜೆ, ಕಾರ್ಯದರ್ಶಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ್ ಕಾಂತಳಿಕೆ, ಕೋಶಾಧಿಕಾರಿಯಾಗಿ ಪವಿತ್ರ ಕೈಪ, ಜೊತೆ ಕಾರ್ಯದರ್ಶಿಯಾಗಿ ಸುಜಾತ ಪಲ್ಲತ್ತಾರು ಅವರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here