ವಿಟ್ಲ: ಮಾಣಿ ವಲಯದ ಏಮಾಜೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಮಾಹಿತಿ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಹರೀಶ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಣಿ ಶೌರ್ಯ ಘಟಕದ ಪ್ರತಿನಿಧಿ ಸತೀಶ್ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಸಹ ಶಿಕ್ಷಕಿ ದೀಕ್ಷಾ ವಂದಿಸಿದರು. ಸಹ ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಐಸಮ್ಮ ಸಹಕರಿಸಿದರು.