ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಮಕುಂಜ ಮತ್ತು ನೇತ್ರಾವತಿ ತುಳುಕೂಟ ರಾಮಕುಂಜ ಇದರ ಆಶ್ರಯದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ರಾಮಕುಂಜ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ತುಳು ವಿದ್ಯಾರ್ಥಿಲೆನ ಪ್ರತಿಭಾ ಕಾರಂಜಿಯಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ ಲಭಿಸಿದೆ.

ಭೌತಿಕ್ (10ನೇ) ಭಾವಗೀತೆ, ಗಾನವಿ (10ನೇ) ಕರಕುಶಲ ವಸ್ತುಗಳ ತಯಾರಿಕೆ, ನಮ್ರತಾ ಮತ್ತು ಅನಘ (10ನೇ) ಸಬಿ ಸವಾಲ್,ಶಾರ್ವರಿ ಮತ್ತು ತಂಡ (10ನೇ ) ಜಾನಪದ ಕುಣಿತಗಳಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಶರಣ್ಯ ಶೆಟ್ಟಿ (10ನೇ) ಜಾನಪದ ಕಥೆ, ವಂಶಿ (10ನೇ ) ಚಿತ್ರಕಲೆ, ರಕ್ಷಾ ಮತ್ತು ಪ್ರಜ್ವಲ್ (10ನೇ) ಒಗಟುಗಳಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಶಾಲೆಗೆ ಸಮಗ್ರ ಪ್ರಶಸ್ತಿ ಲಭಿಸಿದೆ. ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಹಾಗೂ ಶಿಕ್ಷಕರು ಮತ್ತು ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ 13 ಶಾಲೆಗಳ ವಿದ್ಯಾರ್ಥಿಗಳು ಭಾಗವಿಹಿಸಿದ್ದರು.