ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಸಂಭ್ರಮದ ಲೆಕ್ಕ ಪತ್ರ ಮಂಡನೆ- ಕೃತಜ್ಞತ ಸಭೆ

0

ಕಾಣಿಯೂರು: ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಸಂಭ್ರಮ ಕಾರ್ಯಕ್ರಮದ ಲೆಕ್ಕ ಪತ್ರ ಮಂಡನೆ ಮತ್ತು ಕೃತಜ್ಞತ ಸಭೆಯು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಜು 13ರಂದು ನಡೆಯಿತು. ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ ರವರು ಮಾತನಾಡಿ, ಎಲ್ಲರ ಸಹಕಾರ, ಶ್ರಮದಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದ್ದು, ಮುಂದಿನ ದಿನಗಳಲ್ಲಿಯೂ ಭಜನಾ ಮಂಡಳಿಯ ಅಭಿವೃದ್ಧಿಯಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.


ಭಜನಾ ಮಂಡಳಿಯ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ ಅಧ್ಯಕ್ಷತೆಯನ್ನು ವಹಿಸಿದ್ದರು. ಸುವರ್ಣ ಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ಪದ್ಮಯ್ಯ ಗೌಡ ಅನಿಲ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಭಜನಾ ಮಂಡಳಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಭಜನಾ ಮಂಡಳಿ ಕೋಶಾಧಿಕಾರಿ ಕೀರ್ತಿಕುಮಾರ್ ಏಳುವೆ ಲೆಕ್ಕಪತ್ರ ಮಂಡಿಸಿದರು. ಕಾರ್ಯದರ್ಶಿ ಜಯಂತ ಅಬೀರ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here