ನೆಲ್ಯಾಡಿ: ಶಿರಾಡಿ ಗ್ರಾಮದ ಗುಂಡ್ಯದಲ್ಲಿ ಗುಂಡ್ಯಹೊಳೆಯಲ್ಲಿ ಅಪರಿಚಿತ ಗಂಡಸಿನ ಶವವೊಂದು ಜು.13ರಂದು ಅಪರಾಹ್ನ ಪತ್ತೆಯಾಗಿದೆ.
ಹೊಳೆ ನೀರಿನಲ್ಲಿ ತೇಲಿಬಂದ ಶವ ಹೊಳೆಯಲ್ಲಿದ್ದ ಪೊದರಿನ ಮಧ್ಯೆ ಸಿಲುಕಿಕೊಂಡಿತ್ತು. ಇದನ್ನು ಗಮನಿಸಿದ ಸ್ಥಳೀಯರು ನೆಲ್ಯಾಡಿ ಹೊರಠಾಣೆ ಪೊಲೀಸರಿಗೆ ಮಾಹಿತಿ ನೀಡಿದರು. ಪುತ್ತೂರು ಅಗ್ನಿಶಾಮಕ ಠಾಣೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ನೀರಿನಿಂತೆ ಮೇಲೆತ್ತಿದ್ದಾರೆ. ಅಂದಾಜು ಸುಮಾರು 35 ವರ್ಷ ವಯಸ್ಸಿನ ಗಂಡಸಿನ ಶವ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
