ನಿಡ್ಪಳ್ಳಿ: ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ತರಗತಿಯನ್ನು ಉದ್ಘಾಟಿಸಲಾಯಿತು. ಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಮಾಧವ ಪೂಜಾರಿ ರೆಂಜ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯಕ್ಷಗಾನ ನಾಟ್ಯ ಗುರು ಬಿ. ಲಕ್ಷ್ಮೀನಾರಾಯಣ ಭಟ್ ಪ್ರಾರಂಭಿಕ ಹೆಜ್ಜೆಗಳನ್ನು ಕಲಿಸುವ ಮೂಲಕ ತರಬೇತಿಗೆ ಚಾಲನೆ ನೀಡಿದರು. ಮುಖ್ಯ ಗುರು ವಿಜಯಕುಮಾರ್ .ಎಂ ಯಕ್ಷಗಾನ ತರಬೇತಿ ತರಗತಿಯ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ನಮ್ಮ ಕಲೆ ಮತ್ತು ಸಂಸ್ಕೃತಿಯ ಪೋಷಣೆ ಮಾಡಬೇಕೆಂದು ತಿಳಿಸಿದರು.

8ನೇ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥಸಿ, ಆಂಗ್ಲ ಭಾಷಾ ಶಿಕ್ಷಕಿ ಉಮಾ ಸ್ವಾಗತಿಸಿದರು. ಶಿಕ್ಷಕಿ ನಳಿನಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಕಲಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಸಿಂಧು.ವಿ.ಕೆ, ಮಂಜುಳಾ ಭಟ್, ವಿನುತಾ ಸಿ.ಕೆ ಸಹಕರಿಸಿದರು.