ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ʼವಿವೇಕ ನಾವಿನ್ಯ-2025’ ಕಾರ್ಯಕ್ರಮ

0

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಜು.16ರಂದು ಪೂರ್ವಾಹ್ನ 9 ಗಂಟೆಗೆ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ದಿನಾಚರಣೆ ʼವಿವೇಕ ನಾವಿನ್ಯ-2025 ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಲಿದ್ದು, ತುಳು ಚಿತ್ರರಂಗದ ಖ್ಯಾತ ಕಲಾವಿದರಾದಭೋಜರಾಜ್ ವಾಮಂಜೂರುಇವರು ಉದ್ಘಾಟನೆಯನ್ನು ನಡೆಸಿಕೊಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನುವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಸಚಿನ್‌ ಶೆಣೈ ವಹಿಸಿಕೊಳ್ಳಲಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ, ಸಂಚಾಲಕರಾದ ಎಂ.ಗೋಪಾಲಕೃಷ್ಣ ಭಟ್‌, ಪ್ರಾಂಶುಪಾಲರಾದ ಎಂ. ದೇವಿಚರಣ್‌ ರೈ, ಉಪನ್ಯಾಸಕ, ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here