ವಿಟ್ಲ: ಮಾಣಿ ಗ್ರಾಮ ಪಂಚಾಯತ್ ಸಹಾಭಾಗೀತ್ವದೊಂದಿಗೆ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ ಮಾಣಿ ಶಾಖೆ ಇದರ ಆಶ್ರಯದಲ್ಲಿ ಮಹಿಳಾ ನಾಯಕತ್ವ ಜಾಗೃತಿ, ಸ್ವ ಉದ್ಯೋಗ ತರಬೇತಿ ಮತ್ತು ಬ್ಯಾಂಕಿಂಗ್ ಸೌಲಭ್ಯಗಳ ಮಾಹಿತಿ ಕಾರ್ಯಾಗಾರವು ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾತನಾಡಿ, ಮಹಿಳೆಯರು ಸ್ವ ಉದ್ಯೋಗ ಮಾಡುವ ಮೂಲಕ ಸ್ವಾವಲಂಬಿಗಳಾಗಿ ಬದುಕಲು ಇಂತಹ ತರಬೇತಿಗಳು ಅಗತ್ಯ ಎಂದರು.

ಕಾರ್ಯಕ್ರಮವನ್ನು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಆಡಳಿತ ಮಂಡಳಿ ಸದಸ್ಯ ಸುರೇಂದ್ರ ಹೆಗ್ಡೆ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್ ನ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಮಾಹಿತಿ ನೀಡಿದರು.
ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತ ಪೂಜಾರಿ, ಸದಸ್ಯರುಗಳಾದ ಇಬ್ರಾಹಿಂ ಕೆ.ಮಾಣಿ, ಬಾಲಕೃಷ್ಣ ಆಳ್ವ ಕೊಡಾಜೆ, ಮೆಲ್ವಿನ್ ಮಾರ್ಟಿಸ್ ಮಾಣಿ, ನಾರಾಯಣ ಶೆಟ್ಟಿ ತೋಟ, ಸೀತಾ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜ್ಯೋತಿ ರಾಜ್, ಬ್ಯಾಂಕ್ ಆಫ್ ಬರೋಡಾ ಮಾಣಿ ಶಾಖೆಯ ವ್ಯವಸ್ಥಾಪಕ ಅಭಿಲಾಷ್ ಅಜಿತ್, ಬಂಟ್ವಾಳ ಆರ್ಥಿಕ ಸಾಕ್ಷರತಾ ಕೇಂದ್ರದ ಅನುಷಾ, ಬ್ಯಾಂಕ್ ಆಫ್ ಬರೋಡಾ ಮಂಗಳೂರು ಪ್ರಾದೇಶಿಕ ಕಛೇರಿಯ ಆದ್ಯತೆಯ ವಿಭಾಗದ ಉಸ್ತುವಾರಿ ಶ್ರೀ ರಾಮ್, ಆರ್ಥಿಕ ಸೇರ್ಪಡೆ ಉಸ್ತುವಾರಿ ಪ್ರಜ್ವಲ್ ಅತಿಥಿಗಳಾಗಿ ಭಾಗವಹಿಸಿದ್ದರು.