ನಾಳೆ (ಜು.17) ಪುತ್ತೂರು ತಾಲೂಕಿನಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು -ಮುಂಜಾಗ್ರತಾ ಕ್ರಮವಾಗಿ ಪುತ್ತೂರು ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.17ಕ್ಕೆ ರಜೆ ಘೋಷಣೆಯಾಗಿದೆ.‌

ಈ ನಡುವೆ ಪುತ್ತೂರಿಗೆ ವರ್ಗಾವಣೆಗೊಂಡು ಜು.17 ಕ್ಕೆ ಅವರು ಕರ್ತವ್ಯಕ್ಕೆ ಹಾಜರಾಗಲು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ್ದರು‌.

ಈ ನಡುವೆ ಶಾಸಕ ಅಶೋಕ್ ರೈ ಅವರು ಭಾರಿ ಮಳೆಯಿಂದಾಗಿ ಶಾಲಾ ಮಕ್ಕಳಿಗೆ ತೊಂದರೆ ಆಗುತ್ತಿರುವ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರು. ಇದೀಗ ತಹಸೀಲ್ದಾರ್ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here